Mr. Jacques Audibert, Diplomatic Advisor to the French President meets Prime Minister Modi

ಫ್ರೆಂಚ್ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಶ್ರೀ ಜಾಕ್ಯೂಸ್ ಅಡಿಬೆರ್ಟ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರು 2015ರಲ್ಲಿ ತಾವು ಕೈಗೊಂಡಿದ್ದ ಫ್ರಾನ್ಸ್ ಪ್ರವಾಸವನ್ನು ಮತ್ತು ಅಧ್ಯಕ್ಷ ಹೊಲ್ಲಾಂಡೆ ಅವರು 2016ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭೇಟಿ ಕೊಟ್ಟಿದ್ದನ್ನು ಸ್ಮರಿಸಿದರು, ಮತ್ತು ಈ ಭೇಟಿಯ ವಿನಿಮಯಗಳು, ಮುಂಬರುವ ವರ್ಷಗಳಲ್ಲಿ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸಲು ಹಾಕಿದ ಬುನಾದಿಯಾಗಿದೆ ಎಂದು ಹೇಳಿದರು.
ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಸಂಬಂಧವು ರಕ್ಷಣೆ, ಬಾಹ್ಯಾಕಾಶ ಮತ್ತು ನಾಗರಿಕ ಪರಮಾಣು ಸಹಕಾರದಿಂದ ವ್ಯಾಪಕ ಕ್ಷೇತ್ರಗಳಲ್ಲಿ ಅದರಲ್ಲೂ ಭಯೋತ್ಪಾದನೆ ನಿಗ್ರಹ, ಕಡಲ ಸುರಕ್ಷತೆ ಮತ್ತು ಪುನರ್ನವೀಕರಿಸಬಹುದಾದ ಇಂಧನದವರೆಗೆ ವಿಸ್ತರಣೆಯಾಗಿದೆ ಎಂದು ಪ್ರಧಾನಮಂತ್ರಿಗಳು ಹೇಳಿದರು.
ಹವಾಮಾನ ಬದಲಾವಣೆ ವಿರುದ್ಧದ ಜಾಗತಿಕ ಪ್ರಯತ್ನದಲ್ಲಿ ಮೈಲಿಗಲ್ಲಿನ ಸಾಧನೆಯಾಗಿರುವ ಅಂತಾರಾಷ್ಟ್ರೀಯ ಸೌರ ಸಹಯೋಗ ಸ್ಥಾಪನೆಯನ್ನೂ ಪ್ರಧಾನಮಂತ್ರಿಯವರು ಸ್ಮರಿಸಿದರು, ಮತ್ತು ಈ ಉಪಕ್ರಮದಲ್ಲಿ ಫ್ರೆಂಚ್ ಬೆಂಬಲಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿಯವರು ಸ್ಮಾರ್ಟ್ ಸಿಟಿಗಳು, ನಗರ ಸಾರಿಗೆ ಮತ್ತು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹೆಚ್ಚಿನ ದ್ವಿಪಕ್ಷೀಯ ಸಹಕಾರಕ್ಕೆ ಪ್ರಧಾನಮಂತ್ರಿಯವರು ಕರೆ ನೀಡಿದರು.