ಉತ್ತರ ಪ್ರದೇಶದ ವಾರಾಣಸಿ ಹಾಗೂ ಚಾಂಡೌಲಿ ನಡುವಿನ ರಾಜಘಾಟ್ ಸೇತುವೆಯಲ್ಲಿ 15.10.2016ರಂದು ಉಂಟಾದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿ ಮತ್ತು ಹಲವರು ಗಾಯಗೊಂಡಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
“ವಾರಾಣಸಿಯಲ್ಲಿ ಕಾಲ್ತುಳತದಲ್ಲಾಗಿರುವ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ.
ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದು, ವಾರಾಣಸಿಯಲ್ಲಿ ಕಾಲ್ತುಳಿತದಿಂದ ಬಾಧಿತರಾದವರಿಗೆ ಎಲ್ಲ ಅಗತ್ಯ ನೆರವಿನ ಖಾತ್ರಿ ಪಡಿಸುವಂತೆ ಸೂಚಿಸಿದ್ದೇನೆ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರು ಘಟನೆಯಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಂಜೂರು ಮಾಡಿದ್ದಾರೆ..
Deeply saddened by the loss of lives in the stampede in Varanasi. Condolences to the bereaved families. Prayers with those injured.
— Narendra Modi (@narendramodi) October 15, 2016
I have spoken to officials & asked them to ensure all possible help to those affected due to the stampede in Varanasi.
— Narendra Modi (@narendramodi) October 15, 2016